ಮಾಜಿ ಪಿಎಂ ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್‍ ಅವರಿಗೆ ಗೌರವ ಡಾಕ್ಟರೇಟ್

Prasthutha|

- Advertisement -

ಬೆಂಗಳೂರು: ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಆಯ್ಕೆ ಶಿಫಾರಸ್ಸಿಗೆ ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದು, ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಇಬ್ಬರೂ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.



Join Whatsapp