- Advertisement -
ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ.