ಮಡಿಕೇರಿ: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್ ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಬಂದ್ ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಆದರೆ ಕೊಡಗಿನಲ್ಲಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸದ್ಯಕ್ಕೆ ಜಿಲ್ಲೆಯಲ್ಲಿ ಕಾವೇರಿ ಬಂದ್ ಬಿಸಿ ತಟ್ಟದೆ ಕನ್ನಡ ಪರ ಹಾಗೂ ರೈತ ಸಂಘಟನೆಗಳಿಗೆ ಮಾತ್ರ ಪ್ರತಿಭಟನೆ ಸೀಮಿತವಾಗಿದೆ.
ಮುಂಜಾನೆಯಿಂದಲೂ ಜಿಲ್ಲೆಯಲ್ಲಿ ಸಾರಿಗೆ, ಆಟೋ ಸಂಚಾರ, ಅಂಗಡಿ ಮುಗ್ಗಟ್ಟು, ವ್ಯಾಪಾರ – ವಹಿವಾಟು ಸೇರಿದಂತೆ ಜನ ಜೀವನ ಎಂದಿನಂತೆ ಸಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ.