ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|


ಬೆಂಗಳೂರು: ನಮ್ಮದು ಜಾತ್ಯಾತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲಾ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದರು.

- Advertisement -

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.

ಶ್ಯಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಹೇಳಿರುವ ಬಗ್ಗೆ ಮಾತನಾಡಿ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

- Advertisement -

ಹೆಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ
ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಶನಗೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.



Join Whatsapp