ಶಿವಮೊಗ್ಗ | ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ: ಪರಮೇಶ್ವರ್

Prasthutha|

- Advertisement -

ಬೆಂಗಳೂರು: ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ, ನಿಮಗೂ ಹೇಳಲ್ಲ. ಅನುಮತಿ ಇಲ್ಲದೆ ಆಗಿದೆ. ಇಂತಹದ್ದಕ್ಕೆಲ್ಲ ಪ್ರಚೋಚನೆ ನೀಡುವುದಿಲ್ಲ ಎಂದರು.



Join Whatsapp