ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿದ್ದ ಅರ್ಜಿ ವಜಾ

Prasthutha|

ಹೆಚ್ಚುತ್ತಿರುವ ಅಪರಾಧ ಮತ್ತು ಸಾಂವಿಧಾನಿಕ ವ್ಯವಸ್ಥೆಗೆ ಅಡ್ಡಿಪಡಿಸುತ್ತಿರುವುದನ್ನು ಉಲ್ಲೇಖಿಸಿ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಫಿರ್ಯಾದಿದಾರನಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸುವುದರ ಜೊತೆಗೆ ಇತರ ರಾಜ್ಯಗಳಲ್ಲಿನ ಅಪರಾಧಗಳನ್ನು ಅಧ್ಯಯನ ಮಾಡಲು ನ್ಯಾಯಾಲಯವು ವಕೀಲರನ್ನು ಕೇಳಿದೆ.

- Advertisement -

ದೂರುದಾರರು ತಾವು ಎತ್ತಿದ ವಾದಗಳನ್ನು ಅಧ್ಯಯನ ಮಾಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಬೋಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಹೇಳಿದ್ದಾರೆ. ದೂರುದಾರನ ಮೂಲಭೂತ ಹಕ್ಕುಗಳನ್ನು ಹೇಗೆ ನಿರಾಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ರಾಷ್ಟ್ರೀಯ ಕ್ರೈಂ ರೆಕಾರ್ಡ್ಸ್ ಬ್ಯೂರೋ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿಗಳ ಪ್ರಕಾರ ಉತ್ತರಪ್ರದೇಶದಲ್ಲಿ ಅಪರಾಧಗಳು ಹೆಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರುದಾರ ಜಯ ಸೂಕಿನ್ ಹೇಳಿದ್ದಾರೆ.

“ನೀವು ಇತರ ರಾಜ್ಯಗಳ ಅಪರಾಧದ ಅಂಕಿಅಂಶಗಳನ್ನು ಅಧ್ಯಯನ ಮಾಡಿದ್ದೀರಾ? ನೀವು ಯಾವ ಮಾಹಿತಿಯ ಆಧಾರದ ಮೇಲೆ ದೂರು ದಾಖಲಿಸಿದ್ದೀರಿ? ” ಎಂದು ನ್ಯಾಯಾಲಯ ಕೇಳಿದೆ. ಹೆಚ್ಚು ವಾದ ಮಾಡಿದರೆ ದಂಡಕ್ಕೆ ಕಾರಣವಾಗುತ್ತವೆ ಎಂದು ನ್ಯಾಯಾಲಯ ಎಚ್ಚರಿಸಿದೆ. ದೂರುದಾರರು ಎತ್ತಿದ ವಾದಗಳಲ್ಲಿ ಮಾನ್ಯತೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.



Join Whatsapp