ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಈ ವಿಚಾರವಾಗಿ ನನಗೂ ವೈಯಕ್ತಿಕವಾಗಿ ಅಸಮಾಧಾನವಿದೆ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವತ್ತೂ ನಮ್ಮ, ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಹತ್ತಿರದಿಂದ ಮಾನಸಿಕವಾಗಿ ಕಿರುಕುಳ ನೋಡಿದ್ದೇನೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇತ್ತು. ಅವರು ಇವರಿಗೆ ಮತ ಹಾಕಲಿಲ್ಲ, ಇವರು ಅವರಿಗೆ ಮತ ಹಾಕಲಿಲ್ಲ. ಯಾರೂ ಕೂಡ ಈ ಬಗ್ಗೆ ವೈಯಕ್ತಿಕವಾಗಿ ಹೇಳುತ್ತಿಲ್ಲ. ಮೈತ್ರಿ ವಿಚಾರವಾಗಿ ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚಿಸಿಲ್ಲ ಎಂದಿದ್ದಾರೆ.