ಬಿಜೆಪಿ- ಜೆಡಿಎಸ್ ಮೈತ್ರಿ: ಡಿವಿ ಸದಾನಂದ ಗೌಡ ವಿರೋಧ

Prasthutha|

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕೆಲವು ನಾಯಕರ ವಿರೋಧಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಿಎಂ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -


ಇದೇ ವಿಚಾರವಾಗಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಆದರೆ ಈ ಬಗ್ಗೆ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ಹೈಕಮಾಂಡ್ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟು ಕೇಂದ್ರದ ನಾಯಕರೇ ಈ ತೀರ್ಮಾನವನ್ನು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Join Whatsapp