ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂದ ಪುನೀತ್ ಕೆರೆಹಳ್ಳಿ ವಿರುದ್ಧ ದೂರು

Prasthutha|

ಬೆಂಗಳೂರು: ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಎಲ್ಲರ ಎದುರಿಗೆ ಬಹಿರಂಗವಾಗಿ ”ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ” ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.



Join Whatsapp