ಇನ್ನೂ ನಿಮ್ಮ ಖಾತೆ ಸೇರಿಲ್ಲವೇ ಗೃಹ ಲಕ್ಷ್ಮಿ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಕಾರಣ

Prasthutha|

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂ.ಗಳ ಆರ್ಥಿಕ ನೆರವು ಇದುವರೆಗೂ 9.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಸದ್ಯ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

- Advertisement -


ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.


ಹಣ ಜಮೆಯಾಗದಿರೋದಕ್ಕೆ ಕಾರಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಇನ್ನು ಹಣ ಜಮೆಯಾಗದಿರೋದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ನೀಡಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೀತಿದೆ ಎಂದು ತಿಳಿಸಿದ್ದಾರೆ. ಇನ್ನು ಸೆಪ್ಟೆಂಬರ್ನಲ್ಲಿ 1ಕೋಟಿ 14ಲಕ್ಷ ಜನ ಗೃಹಲಕ್ಷ್ಮೀ ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್ ನಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ 2280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.



Join Whatsapp