ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

Prasthutha|

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

- Advertisement -


ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ.


ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.



Join Whatsapp