ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ: ಡಿಕೆ.ಶಿವಕುಮಾರ್

Prasthutha|

ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

- Advertisement -


ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು.


“ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.
ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.



Join Whatsapp