ಬೆಂಗಳೂರು: ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಬ್ಯಾಂಕ್ ಸಾಲ ವಸೂಲಾತಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ರೈತರ ಸಾಲಗಳನ್ನು ಪುನರ್ ರಚಿಸುವಂತೆ ಬ್ಯಾಂಕರ್ ಗಳ ಸಮಿತಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರ್ಕಾರವಿದೆ, ರೈತರಿಗೆ ಯಾವುದೇ ಲಾಭವಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ನಿನ್ನೆ ವಾಗ್ಧಾಳಿ ನಡೆಸಿದ್ದರು. ಅಲ್ಲದೇ ಹಲವು ಬಿಜೆಪಿ ನಾಯಕರು ವಾಗ್ಧಾಳಿ ನಡೆಸಿದ್ದರು.