ಮಳೆ ಅಭಾವದಿಂದ ಇಳುವರಿ ಕುಸಿತ; ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗನನಕ್ಕೇರುವ ಸಾಧ್ಯತೆ!

Prasthutha|

ಶಿವಮೊಗ್ಗ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ರಾಜ್ಯದ ಬಹುತೇಕ ತಾಲ್ಲೂಕುಗಳು ಭೀಕರ ಬರದಿಂದ ತತ್ತರಿಸುತ್ತಿರುವುದರಿಂದ ಈರುಳ್ಳಿ ಬೆಳೆಯುವ ಪ್ರದೇಶಗಳಾದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಗದಗ, ವಿಜಯಪುರ ಮತ್ತು ಕರ್ನಾಟಕದ ಇತರ ಭಾಗಗಳಿಗೆ ಭಾರಿ ಹೊಡೆತ ಬಿದ್ದಿದೆ. 

ರಾಜ್ಯದಲ್ಲಿ ಹೊಸ ಈರುಳ್ಳಿ ಬೆಳೆಯ ಒಟ್ಟು ಇಳುವರಿ ಕೇವಲ ಶೇ 40ರಷ್ಟಿದ್ದು, ಈಗಾಗಲೇ ಶೇ 25ರಷ್ಟು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಬೆಳೆಯುವ ಈರುಳ್ಳಿ ಬೆಳೆ ಹೊರತುಪಡಿಸಿ, ಇಡೀ ಈರುಳ್ಳಿ ಮಾರುಕಟ್ಟೆ ನಾಸಿಕ್ ಮತ್ತು ಮಹಾರಾಷ್ಟ್ರದ ಇತರ ಈರುಳ್ಳಿ ಬೆಳೆಯುವ ಪ್ರದೇಶಗಳನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.



Join Whatsapp