ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದ ನ್ಯಾಯಾಲಯ

Prasthutha|

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್‌ 16ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ಬುಧವಾರ ಹೇಳಿದೆ.

- Advertisement -


ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಟಿ ಗೋವಿಂದಯ್ಯ ಅವರು ಬುಧವಾರ ಆದೇಶ ಕಾಯ್ದಿರಿಸಿದರು.



Join Whatsapp