ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ: ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಸಿಎಂ ಇಬ್ರಾಹಿಂ

Prasthutha|

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಸೋಲಬೇಕಿದೆ ಎಂದು ಹೇಳಿದ್ದಾರೆ.

- Advertisement -


ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ. ಬಿಜೆಪಿ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಸೋಲಬೇಕಿದೆ. ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆದ್ದಿದ್ದು ಹೇಗೆ? ಕುಮಾರಸ್ವಾಮಿ ಎಂಎಲ್ಎ ಆಗಿದ್ದಕ್ಕೆ ಅಮಿಶ್ ಶಾ ಕರೆದಿದ್ದು. ಮುಸ್ಲಿಮರ ಮತ ಹಾಕದಿದ್ದರೆ ನೀವು ಸೋತು ಮನೆಯಲ್ಲಿ ಇರಬೇಕಿತ್ತು ಎಂದರು.



Join Whatsapp