ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು,  ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗೆ ಟ್ವೀಟ್ ಮಾಡಿ ತಿಳಿಸಿರುವ ರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

- Advertisement -

ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.



Join Whatsapp