ಮಧ್ಯಾಹ್ನದ ‘ಬಿಸಿಯೂಟ’ ಯೋಜನೆಗೆ ಕೇಂದ್ರ-ರಾಜ್ಯ ಸರ್ಕಾರದಿಂದ 212 ಕೋಟಿ ರೂ. ಬಿಡುಗಡೆ

Prasthutha|

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ.

- Advertisement -

ಒಟ್ಟಾರೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ- ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಸಿಕ್ಕಂತಾಗಿದೆ.

2002-03ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಿತು. ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಮೊಟ್ಟೆ, ಹಾಲು ಕೂಡ ನೀಡುತ್ತಿದೆ.

- Advertisement -

ಬಿಸಿಯೂಟ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿಲ್ಲ ಎಂದು ಶಿಕ್ಷಕರು ಇತ್ತೀಚೆಗೆ ಸರ್ಕಾರಕ್ಕೆ ಅಹವಾಲು ಸಲ್ಲಿಸಿದ್ದರು.



Join Whatsapp