ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಪುನರ್ ಸ್ಥಾಪನೆಯನ್ನು ಪ್ರಶ್ನಿಸಿದ್ದ ವ್ಯಕ್ತಿಗೆ ದಂಡ

Prasthutha|

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಸಂಸತ್‌ ಸದಸ್ಯತ್ವ ಪುನರ್‌ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮಾತ್ರವಲ್ಲ, ಅರ್ಜಿದಾರ ವಕೀಲ ಅಶೋಕ್‌ ಪಾಂಡೆ ಅವರಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಅರ್ಜಿ ಸಲ್ಲಿಕೆಯು ನ್ಯಾಯಸಮ್ಮತವಾಗಿಲ್ಲ ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ.

- Advertisement -

2019ರಲ್ಲಿ ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ಗುಜರಾತ್‌ನ ಬಿಜೆಪಿ ನಾಯಕ ಪೂರ್ಣೇಶ್‌ ಮೋದಿ ದಾಖಲಿಸಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ನ ಚೀಫ್‌ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ರಾಹುಲ್‌ ಗಾಂಧಿಯನ್ನು ಅಪರಾಧಿ ಎಂದು ತೀರ್ಪು ನೀಡಿದ್ದರು. ಇದಕ್ಕೆ ಸು‍ಪ್ರೀಂ ಕೋರ್ಟ್ ತಡೆ ನೀಡಿತ್ತು. ಬಳಿಕ ಲೋಕಸಭಾ ಸಚಿವಾಲಯವು ರಾಹುಲ್‌ ಸಂಸತ್‌ ಸದಸ್ಯತ್ವವನ್ನು ಪುನರ್‌ ಸ್ಥಾಪಿಸಿತ್ತು.



Join Whatsapp