ಶ್ರೀಹರಿಕೋಟಾ: ಇಸ್ರೋದ ಬಹು ನಿರೀಕ್ಷಿತ ಮಾನವ ಸಹಿತ ಗಗನಯಾನ ಯೋಜನೆಯ ಮೊದಲ ಹಂತದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ತಾಂತ್ರಿಕ ಸಮಸ್ಯೆಯಿಂದಾಗಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಸಿಬ್ಬಂದಿ ಮಾಡ್ಯೂಲ್ ಉಡಾವಣೆ ಸಮಯವನ್ನು ಇಸ್ರೋ ಮುಂದೂಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಗಗನ್ ಯಾನ್ ಮಿಷನ್ನ ಮೊದಲ ಪರೀಕ್ಷಾ ಹಾರಾಟವನ್ನು ಮುಂದೂಡಲಾಗಿದೆ.
ಶೀಘ್ರದಲ್ಲೇ ಉಡಾವಣೆಯನ್ನು ಮರು ನಿಗದಿಪಡಿಸಲಾಗುವುದು ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ.