ಬೆಂಗಳೂರು: 5 ತಿಂಗಳಾದ್ರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಬಿಜೆಪಿಯಲ್ಲಿ ಟಿಕೆಟ್ ವ್ಯಾಪಾರ ನಡೆದಿದೆ. ಈಗಾಗಲೇ ಒಂದು ದೂರು ದಾಖಲಾಗಿದೆ ಎಂದು ಹೇಳಿದ್ದಾರೆ.
ನಿಗಮ ಮಂಡಳಿ ನೇಮಕ ವಿಚಾರವಾಗಿ ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಈ ಬಗ್ಗೆ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಮಾತನಾಡುತ್ತೇವೆ. ಸಿಎಂ, ನಾನು ಚರ್ಚೆ ನಡೆಸಿದ ಬಳಿಕ ದೆಹಲಿಯವರು ಆಗಮಿಸುತ್ತಾರೆ. ಶಾಸಕರು, ಕಾರ್ಯಕರ್ತರಿಗೆ ಆದಷ್ಟು ಬೇಗ ಅಧಿಕಾರ ಕೊಡುತ್ತೇವೆ ಎಂದು ಹೇಳಿದ್ದಾರೆ.