ಭಾರತದ ಕೆಲಸದ ಸಂಸ್ಕೃತಿ ಬದಲಾಗಬೇಕು, ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು ಎಂದ ಇನ್ಫೋಸಿಸ್ ಸಂಸ್ಥಾಪಕ

Prasthutha|

ನವದೆಹಲಿ: ಭಾರತದ ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.

- Advertisement -

ಇನ್ಫೋಸಿಸ್ನ ಮಾಜಿ ಸಿಎಫ್ ಒ ಮೋಹನ್ ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದರು.



Join Whatsapp