ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಬೆಂಕಿ ಅವಘಡ ಸಂಭವಿಸಿದ್ದು, ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿ ಬಳಿಕ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಪರಿಣಾಮ ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಭಷ್ಮವಾಗಿದೆ.
ಬೆಂಗಳೂರಿನ ವೀರಭದ್ರ ನಗರದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ಗಳು ಸುಟ್ಟು ಹೋಗಿವೆ.ಪಕ್ಕದಲ್ಲಿಯೇ ಶೆಡ್ ಗಳಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ. ಸ್ಥಳದಲ್ಲಿ ನಿಲ್ಲಿಸಿರುವ ಎರಡು ಬಸ್‌ಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡು ನಂತರ ಅದು ಹತ್ತಕ್ಕೂ ಹೆಚ್ಚು ಬಸ್‌ಗಳಿಗೆ ಚಾಚಿಕೊಂಡಿತು.
ನೋಡು ನೋಡುತ್ತಿದ್ದಂತೆ ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿತು. ಸ್ಥಳದಲ್ಲೆಲ್ಲ ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಥಳೀಯರು ಹತ್ತಿರದ ಪೊಲೀಸ್ ಠಾಣೆ ಮತ್ತು ಬಿಬಿಎಂಪಿಗೆ ಮಾಹಿತಿ ತಿಳಿಸಲಾಗಿದೆ. ಸದ್ಯ ಸ್ಥಳಕ್ಕೆ ಎರಡು ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
ಗ್ಯಾರೇಜ್ ನಲ್ಲಿ ಬೆಂಕಿ ಅವಘಡ?
ಎಸ್ ವಿ ಕೋಚ್ ಎಂಬ ಹೆಸರಿನಲ್ಲಿ ಗ್ಯಾರೇಜ್ ನಡೆಸಲಾಗುತ್ತಿತ್ತು. ಶ್ರೀನಿವಾಸ್ ಎಂಬುವರು ಹಲವು ವರ್ಷಗಳಿಂದ ಬಸ್ ಗಳ ಚಾರ್ಸಿಗೆ ಬಾಡಿ ಪಿಟ್ ಮಾಡುವ ಕೆಲಸ ಮಾಡುತ್ತಿದ್ದರು. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಗಳನ್ನ ಬಳಸಿ ಕೆಲಸ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅದರ ಸ್ಪಾರ್ಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.