ಕೇರಳ ಬಾಂಬ್ ಬ್ಲ್ಯಾಸ್ಟ್​ : ಕೇಂದ್ರ ಸಚಿವ ​ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Prasthutha|

ತಿರುವನಂತಪುರಂ: ಕೇರಳದಲ್ಲಿ‌ ಮೂರು ಮಂದಿಯನ್ನು ಬಲಿ ತೆಗೆದ ಚರ್ಚ್​ ಬಾಂಬ್​ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಘಟನೆ ನಡೆದ ಬಳಿಕ ಯಾವುದೇ ಆಧಾರವಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಹರಡಲು ಸಚಿವರು ಯತ್ನಿಸಿದ್ದಾರೆಂಬ ಆರೋಪದ ಮೇಲೆ ದೂರು ದಾಖಲಿಸಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಕೇರಳದಲ್ಲಿ ನಡೆದ ಸರಣಿ ಬಾಂಬ್‌ ಸ್ಪೋಟದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ರಾಜೀವ್‌ ಚಂದ್ರಶೇಖರ್‌ ಕೋಮುದ್ವೇಷ ಉಂಟುಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರು ದಾಖಲಾಗುತ್ತು. ಸ್ಫೋಟದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತಪ್ಪುದಾರಿಗೆಳೆಯುವ ಅಥವಾ ಕೋಮುದ್ವೇಷ ಹರಡುವ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಸರ್ಕಾರ ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದರು.

- Advertisement -

ಈ ಕುರಿತು ಸೈಬರ್ ಸೆಲ್ ಎಸ್‌ಐ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಶೇಖರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು ) ಆರೋಪವನ್ನು ಹೊರಿಸಲಾಗಿದೆ.



Join Whatsapp