ಮೂರು ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಮೂರು ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಬಿಜೆಪಿಗೆ ವಿಪಕ್ಷ ನಾಯಕರನ್ನೇ ಆಯ್ಕೆ ಮಾಡಲು ಆಗುತ್ತಿಲ್ಲ. ಸರ್ಕಾರ ರಚನೆಯಾಗಿ 5 ತಿಂಗಳಾದ್ರೂ ವಿಪಕ್ಷ ನಾಯಕನಿಲ್ಲ. 3-4 ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಎಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ವರದಿಯನ್ನು ಕೊಟ್ಟಿಲ್ಲ. ನಮ್ಮ ವರಿಷ್ಠರು ಕೂಡ ಕೆಲವು ಸಲಹೆ ನೀಡಿದ್ದಾರೆ ಎಂದರು.



Join Whatsapp