ಬೆಂಗಳೂರು: ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ ಶಿವಕುಮಾರ್ ಅವರ ಮಾತಿನ ಅರ್ಥ. ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು. ಕರ್ನಾಟಕದ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೆ ಅಂತಾ ಹೇಳಿದ್ದೆ. ಅಜಿತ್ ಪವಾರ್ಗಳು ಬಹಳ ಜನ ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.