ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ: ಸುಮಲತಾ ಅಂಬರೀಶ್

Prasthutha|

ಮಂಡ್ಯ: ನಾನು ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ. ಇದನ್ನೂ ರಕ್ತದಲ್ಲಿ ಬರೆದು ಕೊಡಬೇಕಾ? ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

- Advertisement -


ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗುವುದಿಲ್ಲ. ಜೆಡಿಎಸ್ ಬಿಜೆಪಿ ಮೈತ್ರಿ ಆಗಿದೆ. ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ಈಗ ಎದ್ದಿರುವ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಬಗ್ಗೆ ನಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಕ್ಷೇತ್ರ ಹಂಚಿಕೆ ಬಗ್ಗೆ ನೂರಾರು ಮಾತುಕತೆ ನಡೆದಿರಬಹುದು. ಆದರೆ ಯಾವುದೇ ಕ್ಷೇತ್ರ ಹಂಚಿಕೆ ಇನ್ನೂ ಖಚಿತವಾಗಿಲ್ಲ. ಮಂಡ್ಯ ಜನ ನನ್ನ ಜೊತೆ ಯಾವಾಗಲೂ ಇದ್ದಾರೆ. ನನಗೆ ಆ ಆತ್ಮವಿಶ್ವಾಸವಿದೆ, ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ನಾನು ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ ಎಂದಿದ್ದಾರೆ.



Join Whatsapp