ದಾವಣಗೆರೆ: ಮೈ ಮೇಲೆ ಬಿಸಿ ಸಾಂಬಾರು ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಮರ್ಥ್ (10) ಸಾವನ್ನಪ್ಪಿದ ಬಾಲಕನಾಗಿದ್ದಾರೆ.
ಮನೆಯಿಂದ ಪಕ್ಕದ ಮನೆಗೆ ಬಿಸಿ ಸಾಂಬಾರು ತೆಗೆದುಕೊಂಡು ಹೋಗುವಾಗ ಎದುರಿಗೆ ಬಂದ ಸಮರ್ಥ್ ಮೇಲೆ ಬಿಸಿ ಸಾಂಬಾರು ಬಿದ್ದಿದೆ. ಇದರಿಂದ ತೀವ್ರ ಗಾಯಗೊಂಡ ಬಾಲಕನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ.