ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ವ್ಯಕ್ತಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ.
ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ.
ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾನಗಲನಲ್ಲಿ ಅಣ್ಣ ಹೊನ್ನೇಗೌಡರ ವ್ಯವಹಾರವನ್ನ ತಮ್ಮ ಕುಮಾರ ನೋಡಿಕೊಳ್ಳುತ್ತಿದ್ದರು. ಆದರೆ ಕೆಲದಿನಗಳ ಹಿಂದೆ ಊರಿಗೆ ಆಗಮಿಸಿದ ಅಣ್ಣ ಹೊನ್ನೇಗೌಡ ಇನ್ನು ಮುಂದೆ ವ್ಯವಹಾರವನ್ನ ನನ್ನ ಪತ್ನಿ ಗೀತಾ ಹೆಸರಲ್ಲಿ ನಡೆಸುವಂತೆ ತಮ್ಮನಿಗೆ ತಿಳಿಸಿದ್ದರು. ವಹಿವಾಟು ತಮ್ಮನ ಬದಲು ಪತ್ನಿಯೇ ಹೆಸರಲ್ಲಿ ನಡೆಸು ಎಂದು ಹೇಳಿದ್ದಕ್ಕೆ ಬೇಸತ್ತ ಕುಮಾರಗೌಡ ಅಣ್ಣನ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.