ನಾಳೆ ‘ದತ್ತಮಾಲಾ’ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್

Prasthutha|

ಚಿಕ್ಕಮಗಳೂರು : ನಾಳೆ ಬಾಬಾ ಬುಡನ್ ದರ್ಗಾದಲ್ಲಿ ದತ್ತಮಾಲಾ ಅಭಿಯಾನಕ್ಕೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬಾಬಾ ಬುಡನ್ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 26 ಚೆಕ್ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ, ಡ್ರೋನ್ ಕಣ್ಗಾವಲು ಅಳವಡಿಸಲಾಗಿದೆ.

- Advertisement -

ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಜನರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.




Join Whatsapp