ತಮಿಳುನಾಡು ಬಿಜೆಪಿ ನಾಯಕಿ ಬಂಧನ: ಬಿಡುಗಡೆಗೆ ಸಿಟಿ ರವಿ ಆಗ್ರಹ

Prasthutha|

ಚೆನ್ನೈ: ವಿದ್ಯಾರ್ಥಿಗಳನ್ನು ನಾಯಿಗಳು ಎಂದು ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ನಾಯಕಿ ಮತ್ತು ನಟಿ ರಂಜನಾ ನಾಚ್ಚಿಯಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಬಸ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ನಾಯಿಗಳು ಎಂದು ನಿಂದಿಸದ್ದಲ್ಲದೆ, ಜೋರು ಮಾಡಿ ಹಲ್ಲೆ ಮಾಡಿದ ಆರೋಪದ ಮೇಲೆ ಈ ಬಂಧನ ನಡೆದಿದೆ.

- Advertisement -

ಕಾನೂನನ್ನು ಕೈಗೆತ್ತಿಕೊಂಡ ಬಿಜೆಪಿ ನಾಯಕಿಯ ರಂಪಾಟದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ವೀಡಿಯೊದಲ್ಲಿ, ವಿದ್ಯಾರ್ಥಿಗಳು ಸರ್ಕಾರಿ ಬಸ್‌ನ ಮೆಟ್ಟಿಲಲ್ಲಿ ನೇತಾಡುತ್ತಿದ್ದು, ನಾಚಿಯಾರ್ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಇದನ್ನು ನೋಡಿದ್ದು, ಬಸ್‌ನ್ನು ನಿಲ್ಲಿಸಿ ಕಂಡೆಕ್ಟರ್‌ ಮತ್ತು ಡ್ರೈವರ್‌ಗೆ ಮೊದಲು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಳಿ ತೆರೆಳಿ ಸಂಘರ್ಷಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳಿಗೆ ನಿಂದಿಸಿ ಬಸ್ಸಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ನೇತಾಡುತ್ತಿದ್ದರೆ ಅವರ ಬಳಿ ಸಂಘರ್ಷ ಮಾಡುವುದು, ನಿಂದಿಸುವುದು ಮತ್ತು ಹಲ್ಲೆ ಮಾಡುವುದು ಎಷ್ಟು ಸರಿ? ಪೊಲೀಸರಿಗೆ ಮಾಹಿತಿ ನೀಡುವುದಷ್ಟೇ ಜವಾಬ್ದಾರಿಯುತ ನಾಗರಿಕರ ಕರ್ತವ್ಯವೇ ಹೊರತು ಕಾನೂನನ್ನು ಕೈಗೆತ್ತಿಕೊಂಡದ್ದು ಅಪರಾಧ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

- Advertisement -

ನಾಚಿಯಾರ್ ಬಂಧನವನ್ನು ಖಂಡಿಸಿದ ಬಿಜೆಪಿ ಮುಖಂಡ ಸಿ.ಟಿ. ರವಿ ಬಸ್‌ಗಳ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವ ಶಾಲಾ ಮಕ್ಕಳ ಜೀವಕ್ಕೆ ಅಪಾಯವನ್ನುಂಟುಮಾಡುವ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರು ಮತ್ತು ಅಧಿಕಾರಿಗಳನ್ನು ಕಂಬಿ ಹಿಂದೆ ಕಳುಹಿಸಬೇಕು.ನಾಚಿಯಾರ್‌ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು X ನಲ್ಲಿ ಆಗ್ರಹಿಸಿದ್ದಾರೆ




Join Whatsapp