ಬಿಹಾರ ಜಾತಿ ಗಣತಿಯಲ್ಲಿ ಮುಸ್ಲಿಮರ, ಯಾದವರ ಸಂಖ್ಯೆ ಹೆಚ್ಚು ತೋರಿಸಲಾಗಿದೆ: ಅಮಿತ್ ಶಾ

Prasthutha|

ಪಾಟ್ನಾ: ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಾತಿ ಗಣತಿಯಲ್ಲಿ ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ತೋರಿಸಿದೆ ಎಂದು ಹೇಳಿದ್ದಾರೆ.

- Advertisement -

ಮುಝಫರ್ ಜಿಲ್ಲೆಯಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಎನ್ ಡಿಎ ಮಿತ್ರಪಕ್ಷವಾಗಿದ್ದಾಗ ತೀರ್ಮಾಣ ತೆಗೆದುಕೊಳ್ಳಲಾಗಿತ್ತು ಎಂದೂ ಅವರು ಹೇಳಿದರು.

ವಿಪಕ್ಷಗಳ ಮೈತ್ರಿಕೂಟ ‘INDIA’ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಈ ಮೈತ್ರಿಕೂಟದ ಒಂದೇ ಒಂದು ಉದ್ದೇಶ ಅಂದರೆ ಅದು ಪ್ರಧಾನಿ ಮೋದಿ ಅವರನ್ನು ವಿರೋಧಿಸುವುದಾಗಿದೆ ಎಂದು ಹೇಳಿದರು. ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ನಿಲ್ಲಿಸಬೇಕು. ವಿಪಕ್ಷಗಳ ಮೈತ್ರಿಕೂಟ ಅವರನ್ನು ಅದರ ಸಂಚಾಲಕನನ್ನಾಗಿ ಕೂಡಾ ಮಾಡಲಿಲ್ಲ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.




Join Whatsapp