ಕಮಾಲ್ ಮಾಡಿದ ಜಗದೀಶ್ ಶೆಟ್ಟರ್: ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರ ಸಂಬಂಧಿ, ಮಾಜಿ ಶಾಸಕ ಚಿಕ್ಕನಗೌಡರ್ ಬಿಜೆಪಿ ತೊರೆದು ಕಾಂಗ್ರೆಸ್​ನತ್ತ ಹೆಜ್ಜೆ ಹಾಕಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ಚಿಕ್ಕನಗೌಡರ್ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಈ ಬೆಳವಣಿಗೆಯ ಹಿಂದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರಾಮತ್ತು ಇರೋದಾಗಿ ತಿಳಿದುಬಂದಿದೆ.

- Advertisement -

ಇತ್ತೀಚೆಗೆ ಸಚಿವ ಪ್ರಿಯಾಂಕ ಖರ್ಗೆ, ಬಿಜೆಪಿಗರು ಮಾತೆತ್ತಿದರೆ ಸರಕಾರ ಬೀಳುತ್ತೆ ಎನ್ನುತ್ತಾರೆ. ಆದರೆ ಬಿಜೆಪಿಯ 50 ನಾಯಕರು ಕಾಂಗ್ರೆಸ್ ಬರುವುದಕ್ಕೆ ರೆಡಿ ಇದ್ದಾರೆ ನೆನಪಿಡಿ ಎಂದು ಹೇಳಿದ್ದರು.




Join Whatsapp