ಉ.ಪ್ರದೇಶ: ಅತ್ಯಾಚಾರಿ ಬಂಧನಕ್ಕೆ ಆಗ್ರಹಿಸಿ ಬೆಂಕಿ ಹಚ್ಚಿಕೊಳ್ಳಲೆತ್ನಿಸಿದ ಸಂತ್ರಸ್ತೆ

Prasthutha|

ಮೀರತ್‌: ಇಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದ ವೇಳೆ ಅತ್ಯಾಚಾರ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ತನ್ನನ್ನು ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸುತ್ತಿಲ್ಲ ಎಂಬ ಕಾರಣಕ್ಕೆ ಆಕೆ ಹೀಗೆ ಮಾಡಿದ್ದಾರೆ. ಬಳಿಕ ಪೊಲೀಸರು ಸುಡುವ ವಸ್ತುಗಳನ್ನು ಕುಟುಂಬದವರಿಂದ ಕಸಿದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

- Advertisement -

ಪೊಲೀಸ್ ಅಧಿಕಾರಿಗಳ ಪ್ರಕಾರ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸುಮಾರು ಆರು ತಿಂಗಳ ಹಿಂದೆ ಅತ್ಯಾಚಾರ ನಡೆದಿದೆ. ಘಟನೆಯ ನಂತರ ಆಕೆ ತನ್ನ ಗ್ರಾಮದ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. 6 ತಿಂಗಳ ಅಪ್ರಾಪ್ತಳಾದ ತನ್ನ ಮೇಲೆ ಅಮಾನವೀಯ ಅತ್ಯಾಚಾರಗೈದ ವ್ಯಕ್ತಿಯ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಬಂಧಿಸಿಲ್ಲ ಎಂದು ಈಗ ಹದಿನೆಂಟು ತುಂಬಿದ ಯುವತಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಆತ್‌ಮಹತ್ಯೆಗೆ ಯತ್ನಿಸಿದ್ದಾರೆ.

ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸರೂರ್‌ಪುರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಎಸ್‌ಡಿಎಂ ಪಂಕಜ್ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.




Join Whatsapp