ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.