ಕೊಚ್ಚಿ: ಕೇರಳದ ಕೊಚ್ಚಿಯ ಕಲಮಸ್ಸೆರಿ ಬಳಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ವೇಳೆ ಮಹಿಳೆಗೆ 70% ರಷ್ಟು ಸುಟ್ಟ ಗಾಯಗಳಾಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ವೆಂಟಿಲೇಟರ್ನ ಬೆಂಬಲದಲ್ಲಿದ್ದರು. ಸೋಮವಾರ ಮುಂಜಾನೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.