ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ನಡೆದಿದೆ.
ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ.
ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.