ಕಾಡಾನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -


ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.


ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ.



Join Whatsapp