ಬೆಂಗಳೂರು: ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಮೌನ ಪ್ರತಿಭಟನೆ ನಡೆಸಿದವರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಪ್ರತಿಭಟನಾಕಾರರು ಅನುಮತಿ ಪಡೆಯದೆ ಮೌನ ಪಾದಯಾತ್ರೆ ನಡೆಸಿದ್ದಾರೆ ಎಂದು ಎಫ್ ಐಆರ್ ದಾಖಲಿಸಲಾಗಿದೆ.
ಭಾನುವಾರ (ನ.05) ಸಂಜೆ ಚರ್ಚ್ ಸ್ಟ್ರೀಟ್‌ನಲ್ಲಿ 100 ಕ್ಕೂ ಹೆಚ್ಚು ಜನರು ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿ ಭಿತ್ತಿಪತ್ರಗಳು ಮತ್ತು ಫಲಕಗಳನ್ನು ಪ್ರದರ್ಶಿಸಿ ಮೌನ ನಡಿಗೆ ನಡೆಸಿದ್ದರು.