ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ರೈತರು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆಯಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ಎಂದು ರೈತರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.