ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಟಿಪ್ಪು ವಕ್ಫ್ ಎಸ್ಟೇಟ್, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ.
ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ.