ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ತನ್ನ ಮಹತ್ವದ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆ ನಡೆಸಲು ಆದೇಶಿಸಿದೆ.
ನೇಮಕಾತಿ ಸಂಬಂಧದ ಅಧಿಸೂಚನೆ ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಆರೋಪರಹಿತ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಶಿವಶಂಕರೇ ಗೌಡ ಅವರಿದ್ದ ನ್ಯಾಯಪೀಠ ಮಹತ್ವದ ಆದೇಶ ನೀಡಿತು.
ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಬಹುದು. ಪಾರದರ್ಶಕವಾಗಿ ಪರೀಕ್ಷೆ ನಡೆಸುವುದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.