ಜಮ್ಮು-ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯದ ಸ್ಥಾನಮಾನ : ಅಮಿತ್ ಶಾ

Prasthutha|

ನವದೆಹಲಿ : ಜಮ್ಮು-ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರ ಮಸೂದೆ ಕುರಿತ ಚರ್ಚೆಯ ವೇಳೆ ಅವರು ಈ ಮಾಹಿತಿ ನೀಡಿದರು.

- Advertisement -

ಪರಿಚ್ಛೇಧ 370 ಹಿಂಪಡೆದ ಬಳಿಕ, ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಾಗ ಮಾಡಿದ 2019ರ ಮಸೂದೆಯ ಕುರಿತ ಆರೋಪಗಳಿಗೆ ಉತ್ತರಿಸಿದ ಅಮಿತ್ ಶಾ, ಮಸೂದೆಯ ಉದ್ದೇಶಗಳನ್ನು ವಿವರಿಸಿದರು. 2019ರ ತಿದ್ದುಪಡಿ ಮಸೂದೆ ಮೂಲಕ, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಉದ್ದೇಶವಿಲ್ಲ ಎಂಬ ಆರೋಪಗಳನ್ನು ಅವರು ತಳ್ಳಿ ಹಾಕಿದರು.

“ನಾನು ಈ ಸದನದಲ್ಲಿ ಈಗಾಗಲೇ ತಿಳಿಸಿದ್ದೇನೆ, ಮತ್ತೊಮ್ಮೆ ಹೇಳುತ್ತೇನೆ. ಮಸೂದೆಗೂ ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನಕ್ಕೂ ಯಾವುದೇ ಸಂಬಂಧವಿಲ್ಲ. ಒಂದು ಸೂಕ್ತ ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡಲಾಗುವುದು” ಎಂದು ಶಾ ಹೇಳಿದರು.



Join Whatsapp