ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 35 ವರ್ಷಗಳ ರಾಜಕೀಯ ಜೀವನದಲ್ಲಿ ಬಹಳಷ್ಟು ವಿಷಯ ಮಾತಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ, ಇನ್ನೇನಿದ್ರೂ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿ ನಿರ್ವಹಿಸಿದ್ದೀನಿ ಎಂದು ಅಸಮಾಧಾನ ಹೊರಹಾಕಿದ್ದಾರೆ.