ಟಿಕೆಟ್ ವಂಚನೆ ಕೇಸ್: ಹಾಲಶ್ರೀ ಬಿಡುಗಡೆ, ಕೇಸರಿ ಶಾಲು ಹಾಕಿ ಸ್ವಾಗತಿಸಿದ ಪ್ರಮೋದ್ ಮುತಾಲಿಕ್

Prasthutha|

ಆನೇಕಲ್: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಮತ್ತು ಗ್ಯಾಂಗ್ 5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.

- Advertisement -


ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹಾಕಿ ಸ್ವಾಗತ ಕೋರಿದ್ದಾರೆ.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಾಲಶ್ರೀ, ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಅದನ್ನು ಪ್ರಕರಣದ ತನಿಖೆ ವೇಳೆ ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ ಎಂದರು.



Join Whatsapp