ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ನಡ್ಡಾರವರು ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ.