ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.