ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕಗೊಂಡಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಹೊಸ ಬಾಟಲಿಗೆ ಹಳೆ ವೈನ್’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಿದ್ಧಾಂತದ ಹಾಗಲ್ಲ ಬಿಜೆಪಿಯದ್ದು. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಅವರ ಪಕ್ಷದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ ಎಂದಿದ್ದಾರೆ.
ಸಮಾಜದಲ್ಲಿರುವ ಎಲ್ಲ ಜಾತಿಯವರು ನಮ್ಮ ಪಕ್ಷದೊಂದಿಗೆ ಇದ್ದಾರೆ. ಎಲ್ಲರನ್ನೊಳಗೊಂಡ ಪಕ್ಷ ನಮ್ಮದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ಅವರಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಪಕ್ಷ ಸಂಘಟನೆಯಲ್ಲಿ ಡಿ.ಕೆ.ಶಿವಕುಮಾರ್ ಅನುಭವ ದೊಡ್ಡದು’ಎಂದು ಹೇಳಿದ್ದಾರೆ.