ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರ ಮರುರಚನೆ ತಿದ್ದುಪಡಿ ಮಸೂದೆ ಮಂಡನೆ

Prasthutha|

ನವದೆಹಲಿ : ‘ಜಮ್ಮು ಮತ್ತು ಕಾಶ್ಮೀರ ಮರುರಚನೆ (ತಿದ್ದುಪಡಿ) ಮಸೂದೆ – 2021’ ಅನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಖಾತೆ ಖಾತೆ ಸಹಾಯಕ ಸಚಿವ ಜಿ. ಕಿಶನ್ ರೆಡ್ಡಿ ಮಂಡಿಸಿದರು.

- Advertisement -

ಜಮ್ಮು ಮತ್ತು ಕಾಶ್ಮೀರದ ನಾಗರಿಕ ಸೇವಾ ಅಧಿಕಾರಿಗಳ ಕೇಡರ್ ಅರುಣಾಚಲ ಪ್ರದೇಶ, ಗೋವಾ, ಮಿಜೋರಾಮ್, ಕೇಂದ್ರಾಡಳಿತ ಪ್ರದೇಶಗಳ ಕೇಡರಿನೊಂದಿಗೆ ವಿಲೀನಗೊಳಿಸುವುದು ಈ ಮಸೂದೆಯ ಪ್ರಮುಖ ಅಂಶವಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ  370 ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕೇಂದ್ರಸರಕಾರ ಕಣಿವೆ ರಾಜ್ಯದಲ್ಲಿ ಸುಮಾರು 170 ಕಾನೂನುಗಳನ್ನು ತಂದಿದೆ ಎಂದು ಸಚಿವ ಜಿ.ಕಿಶನ್ ರೆಡ್ಡಿ ತಿಳಿಸಿದರು.

- Advertisement -

ಜಮ್ಮು ಮತ್ತು ಕಾಶ್ಮೀರದ ವಿವಿಧ ಅಭಿವೃದ್ಧಿ ನಿಟ್ಟಿನಲ್ಲಿ ಸರ್ಕಾರದ ಈ ತಿದ್ದುಪಡಿ ಮಸೂದೆಯನ್ನು ಅನುಮೋದಿಸಬೇಕೆಂದು ಕಿಶನ್ ಲೋಕಸಭೆಯಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಈ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದರು. “ಹೀಗೆ ಮಾಡುವುದಾದರೆ ಸುಗ್ರೀವಾಜ್ಞೆಯ ಅಗತ್ಯತೆಯೇನಿತ್ತು? ಎಂದು ಅವರು ಪ್ರಶ್ನಿಸಿದರು. ತುರ್ತು ಪರಿಸ್ಥಿತಿಯಲ್ಲಿ ಅಥವಾ ತುರ್ತು ಪರಿಸ್ಥಿತಿಗೆ ಮುನ್ನ ಜಾರಿಗೊಳಿಸಬೇಕಾದ ಸುಗ್ರೀವಾಜ್ಞೆಯನ್ನು ಹೀಗೆ ಸಂಸತ್ತಿನಲ್ಲಿ ಜಾರಿಗೊಳಿಸಿದ್ದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅವರು ಹೇಳಿದರು.

ಯಾವುದೇ ಪೂರ್ವ ಕ್ರಮವಿಲ್ಲದೆ 370 ಅನ್ನು ರದ್ದುಗೊಳಿಸಿ ಅಲ್ಲಿ ಸ್ವರ್ಗವನ್ನೇ ಸೃಷ್ಟಿಸುತ್ತೇವೆ, ಬಡತನ ನಿರ್ಮೂಲಣೆ ಮಾಡಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಕನಸು ತೋರಿಸಿ ನೀವು ಜನರನ್ನು ವಂಚಿಸಿದ್ದೀರಿ ಎಂದು ಅಧೀರ್ ರಂಜನ್ ಚೌಧರಿ ಆಕ್ರೋಶ ವ್ಯಕ್ತಪಡಿಸಿದರು.

Join Whatsapp