ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
ಶುಕ್ರವಾರ ರಾಜ್ಯ ವಿಧಾನಸಭಾ ಚುನಾವಣೆಯ ಎರಡನೇ ಹಂತ ನಡೆಯುವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಪ್ರತಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿ ನೆರವು ನೀಡುವ ಭರವಸೆಯನ್ನು ಬಿಜೆಪಿ ನೀಡಿದ ಬೆನ್ನಲ್ಲೇ ಬಫೇಲ್ ಈ ಹೊಸ ಘೋಷಣೆ ಮಾಡಿದ್ದಾರೆ.